ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ನಿಟ್ಟೆ ವಿಶ್ವ ವಿದ್ಯಾನಿಲಯ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಜಿಲ್ಲಾ ಸಂಘಟನಾ ಸಮಿತಿ ಉಡುಪಿ ಜಿಲ್ಲೆ ಮತ್ತು ಕೊರಗ ಸಂಘಟನೆಗಳ ಆಶ್ರಯದಲ್ಲಿ ಕೊರಗ ಜನಪದ ದಾಖಲೀಖರಣ ಮತ್ತು ನಿಘಂಟು ಯೋಜನೆಯ ಮಾಹಿತಿ ಕಾರ್ಯಾಗಾರ ಮತ್ತು ಸಾಧಕರಿಗೆ ಗೌರವದ ಸನ್ಮಾನ ಕಾರ್ಯಕ್ರಮವು ಆಲೂರು ಗ್ರಾಮದ ಹಾಡಿಮನೆಯಲ್ಲಿ ನಡೆಯಿತು.
ಸಮುದಾಯದ ಹಿರಿಯ ಮಹಿಳೆ ಕಾಳು ಕೊರಗ ಉದ್ಘಾಟಿಸಿದರು. ನಿಟ್ಟೆ ವಿಶ್ವ ವಿದ್ಯಾನಿಲಯದ ಮಾನವಿಕ ವಿಭಾಗದ ಪ್ರಭಾರ ಮುಖ್ಯಸ್ಥೆ ಡಾ.ಸಾಯಿಗೀತಾ ಮಾತನಾಡಿ, ಕೊರಗ ಸಮುದಾಯದಲ್ಲಿ ಕಪ್ಪಡ ಕೊರಗ, ಸೊಪ್ಪು ಕೊರಗ, ತೊಪ್ಪು ಕೊರಗ, ಕುಂಟ್ಟು ಕೊರಗ ಎನ್ನುವ ನಾಲ್ಕು ಒಳ ಪಂಗಡಗಳು ಇದೆ. ಭಾಷಾ ದಾಖಲಿಖೀರಣವನ್ನು ಗೌರಿ ಕೆಂಜೂರು, ಬಾಬು ಪಾಂಗಾಳ, ಶ್ರೀಧರ ನಾಡ ನಡೆಸುತ್ತಿದ್ದಾರೆ. ಕೊರಗ ಭಾಷೆಯ ಪ್ರತಿ ಶಬ್ದಗಳನ್ನು ದಾಖಲಿಸುವ ಗುರಿ ಹೊಂದಿದೆ ಎಂದರು.
ಸಮುದಾಯದ ಕಲಾವಿದರು, ಗುರಿಕಾರರು, ಕೃಷಿ ಕ್ಷೇತ್ರ, ಸೃಜನಶೀಲ ಕುಲಕಸುಬು ಕ್ಷೇತ್ರದಲ್ಲಿ ಸಾಧನೆ ಮಾಡಿದ ಕುಷ್ಟು ಕೊರಗ ಯರುಕೊಣೇ, ಶಂಕರ ಬಾರಂದಾಡಿ, ಕಾಳು ಆಲೂರು, ಕರಿಯಮ್ಮ ಆಲೂರು, ಕೃಷ್ಣ ತೆಂಕಬೈಲು, ಮಾಸ್ತಿ ಹೆಮ್ಮಂಜೆ, ಕೊರಗ ನಾರ್ಕಳಿ, ರಾಮ ವಂಡ್ಸೆ, ಈರ ದೀಟಿ, ಹೊನ್ನಮ್ಮ ಕೊಣ್ಕಿ, ಐತಾ ನಂದ್ರೋಳಿ, ರಾಮ ಹೆರೂರು, ಸಂದೀಪ ಮಾರಣಕಟ್ಟೆಯವರನ್ನು ಸನ್ಮಾನಿಸಲಾಯಿತು.
ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಆಲೂರು ಘಟಕಾಧ್ಯಕ್ಷ ಗಣೇಶ ಆಲೂರು ಅಧ್ಯಕ್ಷತೆವಹಿಸಿದರು. ಆಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷ ರವಿ ಶೆಟ್ಟಿ, ಹರ್ಕೂರು ಸೊಸೈಟಿ ಅಧ್ಯಕ್ಷ ಮಂಜಯ್ಯ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಸುಂದರ ಕೊರಗ ಉಪಸ್ಥಿತರಿದ್ದರು. ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಜಿಲ್ಲಾ ಅಧ್ಯಕ್ಷರು ಶ್ರೀಧರ ನಾಡ ರವರು ಪ್ರಾಸ್ತಾವಿಸಿದರು. ನಾಗರಾಜ್ ನಂದ್ರೋಳಿ ಸ್ವಾಗತಿಸಿದರು, ಸುರೇಶ್ ಹೇರೂರು ವಂದಿಸಿದರು, ರೇವತಿ ಆಲೂರು ನಿರೂಪಿಸಿದರು.