ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಸಮುದಾಯದೊಂದಿಗೆ ಉತ್ತಮ ಸಂಬಂಧವನ್ನು ಬೆಳೆಸುವುದರೊಂದಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಸಹಾಯ ಮನೋಭಾವವನ್ನು ರೂಢಿಸಿಕೊಳ್ಳಲು ರೋಟರ್ಯಾಕ್ಟ್ ಕ್ಲಬ್ ಸಹಕಾರಿ. ಆ ಮೂಲಕ ಸಮುದಾಯದ ಜನರೊಂದಿಗೆ ಬೆರೆತು ಬಾಳಲು ಕಲಿಯಿರಿ ಎಂದು ರೋಟರಿ ಕ್ಲಬ್ ಕುಂದಾಪುರದ ನಿಕಟಪೂರ್ವ ಅಧ್ಯಕ್ಷರಾದ ಡಾ| ರಾಜರಾಮ ಶೆಟ್ಟಿ ಹೇಳಿದರು.
ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋಟರ್ಯಾಕ್ಟ್ ಕ್ಲಬ್‍ನ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವರ್ಷಲಾ, ದ್ವಿತೀಯ ಬಿ.ಕಾಂ. ‘ಸಿ’ ಇವರನ್ನು ಕಾಲೇಜಿನ ರೋಟರ್ಯಾಕ್ಟ್ ಕ್ಲಬ್‍ನ ಅಧ್ಯಕ್ಷರನ್ನಾಗಿ ಹಾಗೂ ಪೂರ್ಣೇಶ್, ದ್ವಿತೀಯ ಬಿ.ಕಾಂ. ‘ಬಿ’ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳೆಯಲು ರೋಟರಿ ಸಹಾಯಕ ಎಂದರು.
ಮುಖ್ಯ ಅತಿಥಿಗಳಾಗಿ ಕುಂದಾಪುರ ರೋಟರಿ ಕ್ಲಬ್‍ನ ಶ್ರೀ ವೆಂಕಟೇಶ್ ನಾವಡ, ಕಾರ್ಯದರ್ಶಿ ನಾಗರಾಜ ಶೆಟ್ಟಿ, ಶ್ರೀ ಪ್ರಕಾಶ್ಚಂದ್ರ ಶೆಟ್ಟಿ, ಕಾಲೇಜಿನ ರೋಟರ್ಯಾಕ್ಟ್ ಕ್ಲಬ್‍ನ ಸಂಯೋಜಕ ಶ್ರೀ ಸತೀಶ್ ಕಾಂಚನ್ ಉಪಸ್ಥಿತರಿದ್ದರು.
ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಸಂಯೋಜಕಿ ಶ್ರೀಮತಿ ರೇವತಿ ಡಿ. ವಂದಿಸಿದರು. ವಿದ್ಯಾರ್ಥಿನಿ ವರ್ಷಲಾ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ಉಪನ್ಯಾಸಕಿ ಶ್ವೇತಾ ನಿರೂಪಿಸಿದರು.