ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾ.ಹೆ. 66ರ ತಲ್ಲೂರು ಬಳಿಯ ಹೆಮ್ಮಾಡಿ ಸಮೀಪದ ರಾಜಾಡಿಯಲ್ಲಿ ನಡೆದಿದೆ.
ಕನ್ಯಾನ ಗ್ರಾಮದ ನಿವಾಸಿ ದಿ. ಕುಪ್ಪಯ್ಯ ಶೆಟ್ಟಿ ಎಂಬವರ ಪುತ್ರ ರವಿರಾಜ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡವರು.
ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾದ ರವಿರಾಜ್, ಶನಿವಾರ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ. ಹೀಗಾಗಿ ಅವರನ್ನು ಅವರ ತಾಯಿ ಶನಿವಾರ ಪರೀಕ್ಷೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ತಾಯಿಗೆ ಏನೂ ಹೇಳದೆ ಹೆಮ್ಮಾಡಿ ಸಮೀಪದ ರಾಜಾಡಿಯ ಹೆದ್ದಾರಿಯಲ್ಲಿರುವ ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.