ಕುಂದಾಪುರ ಮಿರರ್ ಸುದ್ದಿ…
ಕೋಟ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಶ್ರೀ ಗುರುನರಸಿಂಹ ದೇವರ ದರ್ಶನವನ್ನು ಪಡೆದರು.
ದೇವಳದ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಶ್ರೀ ದೇವರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ಸಚಿವರಿಗೆ ಶಾಲು ಹೋದಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ದೇವಳದ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ , ಬೆಂಗಳೂರಿನ “ಹರ್ಷವಾಣಿ” ಪತ್ರಿಕೆಯ ಸಂಪಾದಕ ಕೆ.ಎಲ್.ರವಿಶಂಕರ್ ಮುಂತಾದವರು ಉಪಸ್ಥಿತರಿದ್ದರು.