ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವುನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಫ್ಟ್ ಬಾಲ್ ಪಂದ್ಯಾಟದಲ್ಲಿ ಸಮಗ್ರ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ “ಬಿ.ಎಂ.ಎಸ್. ಪರ್ಯಾಯ ಪಾರಿತೋಷಕವನ್ನು ಪಡೆದುಕೊಂಡಿದೆ.
ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್. ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.