ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ರಾಜ್ಯ ಬಿಜೆಪಿಯ ನಿರ್ದೇಶನದಂತೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಚುನಾವಣಾ ತಯಾರಿಯ ನಿಟ್ಟಿನಲ್ಲಿ ಕುಂದಾಪುರ ಮಂಡಲದಲ್ಲಿ ಕಾರ್ಯಕರ್ತರ ತುರ್ತು ಸಭೆ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಚುನಾವಣೆ ಸಮೀಪಿಸುತ್ತಿರುವ ನಿಟ್ಟಿನಲ್ಲಿ ಪಕ್ಷದಿಂದ ನೀಡುವ ಎಲ್ಲಾ ಕಾರ್ಯಕ್ರಮವನ್ನು ಕುಂದಾಪುರ ಮಂಡಲದಲ್ಲಿ ಅಚ್ಚುಕಟ್ಟಾಗಿ ನಡೆಯುವಂತೆ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರ ಜವಾಬ್ದಾರಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆ ಮತ್ತು ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದ ಅಂತರದಲ್ಲಿ ವಿಜಯಗಳಿಸುವ ಕುರಿತಾಗಿ ಚರ್ಚಿಸಲಾಯಿತು.
ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಅನಿತಾ ಶ್ರೀಧರ್, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ, ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್, ಮಂಡಲ ಉಪಾಧ್ಯಕ್ಷ ಶ್ರೀಧರ್, ಮಂಡಲ ವಿಸ್ತಾರಕರಾದ ಯೋಗೀಶ್ ಮಾನೆ, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಮಂಡಲ ಪಧಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರ ಅಧ್ಯಕ್ಷರು, ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.