ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಡಿಸೆಂಬರ್ 2022ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ನುರಿತ ಉಪನ್ಯಾಸಕರ ನಿರಂತರ ಬೋಧನೆಯ ಸದುಪಯೋಗವನ್ನು ಪಡೆದುಕೊಂಡು ಶ್ರೇಷ್ಠ ಸಾಧನೆ ಮೆರೆದಿರುವುದು ಶ್ಲಾಘನೀಯ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.