ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕುಂಭಾಶಿ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಅವರು ಬೂತ್ ಅಧ್ಯಕ್ಷರ ಮನೆ ಮತ್ತು ಬೂತ್ ನ ಹತ್ತಾರು ಮನೆಗಳನ್ನು ಸಂಪರ್ಕಿಸಿ ಗೋಡೆ ಬರಹ, ಪೋಸ್ಟರ್, ಪಕ್ಷದ ಸ್ಟಿಕರ್ ಅಳವಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆ ಮತ್ತು ಸಾಧನೆಗಳ ಕುರಿತು ಮಾಹಿತಿ ನೀಡಿ ಬೂತ್ ವಿಜಯ ಸಂಕಲ್ಪ ಅಭಿಯಾನ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಂಡಲ ಕಾರ್ಯದರ್ಶಿ ಸುರೇಂದ್ರ ಕಾಂಚನ್, ಶಕ್ತಿಕೇಂದ್ರ ಅಧ್ಯಕ್ಷ ಮಂಜುನಾಥ್ ಕಾಮತ್, ಮಂಡಲ ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಕುಂಭಾಶಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ವೇತಾ ಶ್ರೀನಿಧಿ, ಬೂತ್ ಅಧ್ಯಕ್ಷ ಶ್ರೀನಿಧಿ ಉಪಾಧ್ಯ, ಫಲಾನುಭವಿಗಳ ಪ್ರಕೋಷ್ಠ ಸಂಚಾಲಕ ಪ್ರಸನ್ನ, ಪ್ರಮುಖರಾದ ಯೋಗೀಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.