ಕುಂದಾಪುರ ಮಿರರ್ ಸುದ್ದಿ…
ಕೋಟ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಳಿಬೆಟ್ಟು ಐರೋಡಿ, ಸಾಸ್ತಾನ ಇಲ್ಲಿ ಕಾರ್ಯಕ್ರಮದ ಮೊದಲ ಭಾಗದಲ್ಲಿ ಶಾಲೆಯ ಉಪವನಕ್ಕೆ ಹೊಸದಾಗಿ ನಿರ್ಮಿಸಿದ ಆವರಣವನ್ನು ಐರೋಡಿ ಗ್ರಾಮ ಪಂಚಾಯತ್ ಸದಸ್ಯ ಸುಧಾಕರ ಪೂಜಾರಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸ್ಪೋಕನ್ ಇಂಗ್ಲೀಷ್ ಫಸ್ಟ್ ಕಾರ್ಯಕ್ರಮವನ್ನು ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಪೂರ್ಣಿಮಾರವರು ಸ್ಪೋಕನ್ ಇಂಗ್ಲೀಷ್ ಫಸ್ಟ್ ಪೋಸ್ಟರ್ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಎಸ್‍ಡಿಎಂಸಿ ಉಪಾಧ್ಯಕ್ಷ ವಿಜಯ ಪೂಜಾರಿ, ಸದಸ್ಯ ಶಿವರಾಮ್ ಕುಲಾಲ್, ಪೋಷಕರಾದ ಸುಷ್ಮಾ ಹಾಗೂ ಶಾಲಿನಿ ಉಪಸ್ಥಿತರಿದ್ದರು. ಹಾಗೆ ಕಾರ್ಯಕ್ರಮದಲ್ಲಿ ಸರ್ವ ಎಸ್‍ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕ ವರ್ಗ ಹಾಗೂ ಶಾಲೆಯ ಮಕ್ಕಳು ನೆರೆದಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು 5ನೇ ತರಗತಿ ವಿದ್ಯಾರ್ಥಿನಿಯರಾದ ಕು. ಸ್ಫೂರ್ತಿ ಮತ್ತು ಕು. ಲಕ್ಷ್ಮಿ ಇಂಗ್ಲಿಷ್ ಭಾಷೆಯಲ್ಲಿ ನಡೆಸಿಕೊಟ್ಟರು.