ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಕೃಷಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಗ್ರಾಮದಲ್ಲಿ ಗುರುವಾರ ನಡೆದಿದೆ. ಇಲ್ಲಿನ ಕೋಣ್ಕಿ ಅಂಗಡಿ ಮನೆ ಭುಜಂಗ ಶೆಟ್ಟಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ.
ಭುಜಂಗ ಶೆಟ್ಟಿ ಗುರುವಾರ ಬೆಳಿಗ್ಗೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹೈ ಟೆನ್ಷನ್ ತಂತಿಯಿಂದ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿದೆ. ವಿದ್ಯುತ್ ಶಾಕಿಗೆ ಭುಜಂಗ ಶೆಟ್ಟಿಯವರ ದೇಹ ಸ್ಥಳದಲ್ಲಿಯೇ ಬೆಂದು ಹೋಗಿದೆ.
ಮೃತದೇಹವನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ಐ ವಿನಯ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.