ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಕ್ಕೆ ಭಕ್ತರಿಗೆ ಆಧಾರ್ ಕಡ್ಡಾಯ

0
864

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ:
ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್-19 ಹಿನ್ನೆಲೆ ಪ್ರಸ್ತುತ ವಿದ್ಯಾಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟಂಬರ್ 4ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ದೇವಾಲಯ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು,ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ.

Click Here

Click Here

ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು ದೇವಸ್ಥಾನ ಪ್ರವೇಶಿಸುವ 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.

ಅಲ್ಲದೆ ಮೂಕಾಂಬಿಕಾ ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Click Here

LEAVE A REPLY

Please enter your comment!
Please enter your name here