ಕುಂದಾಪುರ ಮಿರರ್ ಸುದ್ದಿ…
Video:
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ಸರ್ವತೋಮುಖ ಅಬಿವೃದ್ಧಿ ಸಾಧಿಸುತ್ತಿದೆ ಎಂದು ಬೈಂದೂರು ಶಾಸಕ ಬಿ. ಎಂ.ಸುಕುಮಾರ ಶೆಟ್ಟಿ ಹೇಳಿದರು.
ಶಂಕರನಾರಾಯಣ ಗ್ರಾಮದ ಸೌಡದಲ್ಲಿ ರೂ.24.95ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಸ್ವಂತ ಕಟ್ಟಡದ ಶಿಲಾನ್ಯಾಸ ನೆರವೆರಿಸಿ ಮಾತನಾಡಿದರು.
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ 3000 ಕೋಟಿ ಅಭಿವೃದ್ಧಿಯ ಕೆಲಸ ಆಗಿದೆ. ಪ್ರತಿ ಮನೆಗೆ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ. ಕೃಷಿ ಚಟುವಟಿಕೆಗೆ ಏತ ನೀರಾವರಿ ಯೋಜನೆ, 2000 ಕುಟುಂಬಕ್ಕೆ ಮನೆ ನೀವೆಶನ, ಪ್ರತಿ ಮನೆಗೆ ಬೆಳಕು ಯೋಜನೆ, ವೆಂಟೇಡ್ ಡ್ಯಾಮ್, ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಾಗಿದೆ ಎಂದವರು ಹೇಳಿದರು.
ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನೀರ್ದೇಶಕಿ ಅನಿತಾ ಮಡ್ಲೂರು, ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್, ಜಿಲ್ಲಾ ಸಮನ್ವಯ ಅಧಿಕಾರಿ ಪೂರ್ಣಿಮಾ, ಶಂಕರನಾರಾಯಣ ಗ್ರಾ.ಪಂ.ಅಧ್ಯಕ್ಷೆ ಗೀತಾ ಮೋಗವೀರ, ಉಪಾಧ್ಯಕ್ಷ ರವಿಕುಲಾಲ್, ಸಾಮಾಜಿಕ ನ್ಯಾಯಸಮಿತಿಯ ಅಧ್ಯಕ್ಷ ಪಾಂಡು ನಾಯ್ಕ್ ಉಪಸ್ಥಿತರಿದ್ದರು.
ಪ್ರಕಾಶ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳ್ನಾಡಿದರು. ರವಿ ಕುಲಾಲ್ ವಂದಿಸಿದರು.