ಚಿತ್ತೂರು :ಸಹಕಾರ ಸಂಸ್ಥೆಗಳಲ್ಲಿ ಪಾರದರ್ಶಕ ವ್ಯವಹಾರ – ಡಾ.ಎಂ.ಎನ್ ರಾಜೇಂದ್ರ ಕುಮಾರ್

0
229

ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘ ನಿ., ವಂಡ್ಸೆ ಇದರ ಗೋದಾಮು ಕಟ್ಟಡ ಮತ್ತು ನೂತನ ಚಿತ್ತೂರು ಶಾಖೆ ಉದ್ಘಾಟನೆ

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘ ನಿ., ವಂಡ್ಸೆ ಇದರ ಗೋದಾಮು ಕಟ್ಟಡ ಉದ್ಘಾಟನೆ ಮತ್ತು ನೂತನ ಚಿತ್ತೂರು ಶಾಖೆ ಉದ್ಘಾಟನೆ ಮಾ.4 ಶನಿವಾರ ನಡೆಯಿತು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರಾದ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ಚಿತ್ತೂರು ಶಾಖೆಯನ್ನು ಉದ್ಘಾಟಿಸಿ, ಸಹಕಾರ ಸಂಘಗಳು ಪಾರದರ್ಶಕವಾದ ಸೇವೆಯ ಮೂಲಕ ವಿಶ್ವಾಸ ಗಳಿಸಿವೆ. ಇಲ್ಲಿ ಬಡ್ಡಿದರ, ಸದಸ್ಯರಿಗೆ ಸಿಗುವ ಸೇವೆ ಎಲ್ಲವೂ ಕೂಡಾ ಪಾರದರ್ಶಕವಾಗಿ ತಿಳಿಸಲಾಗುತ್ತದೆ. ಇವತ್ತು ಸಹಕಾರ ಕ್ಷೇತ್ರ ಕಡಿಮೆ ಬಡ್ಡಿಯಲ್ಲಿ ಸಾಲ ನೀಡುತ್ತಿದೆ. ಕಳೆದ 28 ವರ್ಷಗಳಲ್ಲಿ ಅವಿಭಜಿತ ದ.ಕ ಜಿಲ್ಲೆಯ ರೈತರು ಕೃಷಿಸಾಲವನ್ನು ಸರಿಯಾಗಿ ಮರುಪಾವತಿ ಮಾಡುವ ಮೂಲಕ ದೇಶದಲ್ಲಿ ಪ್ರಥಮ ಸ್ಥಾನದಲ್ಲಿವೆ. ಅವಿಭಜಿತ ಜಿಲ್ಲೆಯ ಸಹಕಾರ ಸಂಘಗಳು ಕೂಡಾ ಲಾಭದಾಯಕವಾಗಿ ಮುನ್ನೆಡೆಯುತ್ತಿದೆ ಎಂದರು.

ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘ ಇವತ್ತು ಆರು ಗ್ರಾಮಗಳ ವ್ಯಾಪ್ತಿಯಲ್ಲಿ ನಾಲ್ಕು ಶಾಖೆಗಳ ಮೂಲಕ ಸೇವೆ ನೀಡುತ್ತಿದೆ. ಸರ್ಕಾರದ ಸಾಲಮನ್ನಾ ಆದಾಗ ಈ ಸಂಘದ ವ್ಯಾಪ್ತಿಯಲ್ಲಿ 6.5 ಕೋಟಿ ಸಾಲಮನ್ನವಾಗಿದೆ ಎಂದರು.

Click Here

ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಗೋದಾಮು ಕಟ್ಟಡ ಉದ್ಘಾಟಿಸಿ, ಮಂಜಯ್ಯ ಶೆಟ್ಟರು ಬಹಳಷ್ಟು ಉತ್ತುಂಗಕ್ಕೇರಿಸಿದ್ದಾರೆ. ಈ ಭಾಗದ ಬಲಾಢ್ಯ ಸಹಕಾರ ಸಂಘವಾಗಿ ಬೆಳೆದಿದೆ. ಈ ಸಂಘವನ್ನು ಆರಂಭಿಸಿ, ಮುನ್ನೆಡೆಸಿದ ಎಲ್ಲರ ಶ್ರಮವೂ ಶ್ಲಾಘನಾರ್ಹ ಎಂದರು.

ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್.ರಾಜು ಪೂಜಾರಿ, ಎಮ್.ಮಹೇಶ ಹೆಗ್ಡೆ ಮೊಳಹಳ್ಳಿ, ದೇವಿಪ್ರಸಾದ ಶೆಟ್ಟಿ, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ.ಅತುಲ್ ಕುಮಾರ್ ಶೆಟ್ಟಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸದಾಶಿವ ಶೆಟ್ಟಿ ಸಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಉಪಾಧ್ಯಕ್ಷ ಜಗನ್ನಾಥ ಶೆಟ್ಟಿ ಹೊಸೂರು, ನಿರ್ದೇಶಕರಾದ ಕೆ.ಭುಜಂಗ ಶೆಟ್ಟಿ ಕೆರಾಡಿ, ಐ.ಗೋವರ್ದನ್ ಶೆಟ್ಟಿ ಇಡೂರು, ಬಿ.ರಾಮ ಹೊಸೂರು, ಸಂಜೀವ ಪೂಜಾರಿ ವಂಡ್ಸೆ, ಎ.ಜಯರಾಮ ಶೆಟ್ಟಿ ವಂಡ್ಸೆ, ಶೀನಪ್ಪ ಶೆಟ್ಟಿ ಹೊಸೂರು, ಕೃಷ್ಣಯ್ಯ ಆಚಾರ್ ಚಿತ್ತೂರು, ಶ್ರೀಮತಿ ಕಸ್ತೂರಿ ಎಸ್.ಶೆಟ್ಟಿ ಚಿತ್ತೂರು, ರಾಜೇಶ ಶೆಟ್ಟಿ ಚಿತ್ತೂರು, ಸುನೀಲ್ ನಾಯ್ಕ್ ಕೆರಾಡಿ, ಶ್ರೀಮತಿ ನಾಗರತ್ನ ಶೆಟ್ಟಿ ಹೊಸೂರು, ಕೆ.ಶೇಖರ ಶೆಟ್ಟಿ ಬೆಳ್ಳಾಲ, ಶಿವಪ್ಪ ಶೆಟ್ಟಿ ಇಡೂರು, ವಲಯ ಮೇಲ್ವಿಚಾರಕ ಉದಯ ಶೆಟ್ಟಿ ಎ ಉಪಸ್ಥಿತರಿದ್ದರು.

ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಜಿ.ಪೂಜಾರಿ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here