ಕುಂದಾಪುರ ಮಿರರ್ ಸುದ್ದಿ…
ಕೋಟ : ಇಲ್ಲಿನ ಕೋಟತಟ್ಟು ಪಡುಕರೆ ಟೀಮ್ ಭವಾಬ್ಧಿ ಇವರ ನೇತ್ರತ್ವದಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮದ ಪ್ರಯುಕ್ತ ಕೆ.ಎಂ.ಸಿ ಮಣಿಪಾಲದ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ,ವೈದ್ಯಕೀಯ ತಪಾಸಣಾ ಕಾರ್ಯಕ್ರಮ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ ಉದ್ಘಾಟಿಸಿದರು.
ಟೀಮ್ ಭವಾಬ್ಧಿ ಅಧ್ಯಕ್ಷ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ವಿಶ್ವನಾಥ್, ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯರಾದ ವಿದ್ಯಾ ಸಾಲಿಯಾನ್, ಸೀತಾ,ರೋಬರ್ಟ್ ನಾಯಕ್, ಕೋಟ ಸಿ ಎ ಬ್ಯಾಂಕ್ ನಿರ್ದೇಶಕ ರಂಜೀತ್ ಕುಮಾರ್, ಸಂಯೋಜಕ ರವೀಂದ್ರ ತಿಂಗಳಾಯ, ಕೇಶವ ಕರ್ಕೇರ, ಕೆ.ಎಂ.ಸಿ ವೈದ್ಯಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.