ಕುಂದಾಪುರ ಮಿರರ್ ಸುದ್ದಿ…
ಕೋಟ: ಮಹಿಳಾ ಮಂಡಳಗಳು ಮಹಿಳೆಯರ ಉನ್ನತಿಗೆ ಪ್ರೇರಕ ಶಕ್ತಿಕೇಂದ್ರವಾಗಿ ರೂಪುಗೊಂಡಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದರು.
ಕೋಟ ಮಹಿಳಾ ಮಂಡಲದ ನೂತನ ಸಭಾಂಗಣ ಲೋಕಾರ್ಪಣೆಗೊಳಿಸಿ ಹಾಗೂ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಹಿಳಾ ಮಂಡಲ ಸಾಕಷ್ಟು ವರ್ಷಗಳನ್ನು ಕ್ರಮಿಸಿಕೊಂಡು ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತದೆ ಇದು ಶ್ಲಾಘನೀಯ ಕಾರ್ಯವಾಗಿದೆ ಎಂದು ವಿಶ್ವಮಹಿಳಾ ದಿನಾಚರಣೆಯ ಶುಭಹಾರೈಕೆ ಸಲ್ಲಿಸಿದರು.
ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಳ ಕೋಟ ಅಧ್ಯಕ್ಷೆ ಸುಶೀಲಸೋಮಶೇಖರ್ ವಹಿಸಿ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು.
ಮುಖ್ಯ ಅಭ್ಯಾಗತರಾಗಿ ಕೋಟ ಅಮೃತೇಶ್ವರಿ ದೇವಳದ ಟ್ರಸ್ಟಿ ಎಂ.ಸುಬ್ರಾಯ ಆಚಾರ್ಯ,ಮಹಿಳಾ ಮಂಡಲದ ಉಪಾಧ್ಯಕ್ಷೆ ಗೀತಾ ಎ ಕುಂದರ್, ಮಾಜಿ ಅಧ್ಯಕ್ಷೆ ಯಶೋಧ ಹಂದೆ ಉಪಸ್ಥಿತರಿದ್ದರು. ಮಹಿಳಾ ಮಂಡಲದ ರಮಾ ಕಾರಂತ್ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಭಾಗ್ಯವಾದಿರಾಜ್ ವಂದಿಸಿದರು.