ವಿದ್ಯಾರ್ಥಿಗಳ ಪರೀಕ್ಷಾ ತಯಾರಿಯಲ್ಲಿ ಪೋಷಕರ ಪಾತ್ರ ಗಣನೀಯವಾದದ್ದು- ಆನಂದ್ ಸಿ ಕುಂದರ್
ಕುಂದಾಪುರ ಮಿರರ್ ಸುದ್ದಿ…
ಕೋಟ: ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಿಸಲು ಶಿಕ್ಷಕರಿಗಿಂತ ಪೋಷಕರ ಪಾತ್ರ ಗಣನೀಯವಾದದ್ದು ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದರು.
ಶನಿವಾರ ಶಾಲಾ ಸಭಾಂಗಣದಲ್ಲಿ ಗೀತಾನಂದ ಫೌಂಡೇಶನ್ ಮಣೂರು ಇವರ ನೇತ್ರತ್ವದಲ್ಲಿ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟ ಘಟಕ, ಮನಸ್ಮಿತ ಫೌಂಡೇಶನ್ ಕೋಟ ಇವರ ಸಹಯೋಗದೊಂದಿಗೆ ಸಂಯುಕ್ತ ಪ್ರೌಢಶಾಲಾ ಮಕ್ಕಳಿಗೆ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಪರೀಕ್ಷಾ ತಯಾರಿ ಪ್ರೇರಣಾ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ
ಪರೀಕ್ಷಾ ಭಯವನ್ನು ಹೊಗಲಾಡಿಸಿ ವಿದ್ಯಾರ್ಥಿಗಳ ಮನೋಬಲವನ್ನು ಹೆಚ್ಚಿಸಲು ಪೋಷಕರು ಪ್ರಯತ್ನಿಸಿಬೇಕು. ವಿದ್ಯಾರ್ಥಿಗಳು ಮೊಬೈಲ್ ವ್ಯಾಮೂಹ ತೊರೆದು ಶೈಕ್ಷಣಿಕ ಬದುಕಿಗೆ ಮುನ್ನುಡಿ ಬರೆಯಿರಿ ಎಂದರಲ್ಲದೆ.ನಮ್ಮ ಶೈಕ್ಷಣಿಕ ದಿನಗಳಲ್ಲಿ ಶಿಕ್ಷಕರು ದಂಡಿಸಿ ಪಾಠಪ್ರವಚ ನೀಡುತ್ತಿದ್ದರು.
ಪ್ರಸ್ತುತ ಶೈಕ್ಷಣಿಕ ವಿದ್ಯಾಮಾನಗಳನ್ನು ಗಮನಿಸಿದರೆ ಶಿಕ್ಷಕರು ಮಕ್ಕಳಿಗೆ ದಂಡಿಸಿದರೆ ಮಕ್ಕಳ ಪೋಷಕರೆ ವಿದ್ಯಾಕೇಂದ್ರಕ್ಕೆ ಬಂದು ಶಿಕ್ಷಕರಿಗೆ ಬೆದರಿಸುವ ಸನ್ನಿವೇಶ ಶೈಕ್ಷಣಿಕ ಬದುಕಿಗೆ ಹಿನ್ನಡೆಯಾಗಲಿದೆ, ಈ ರೀತಿ ಬೆಳವಣಿಗೆ ಪೂರಕವಾದುದ್ದಲ್ಲ ಎಂದು ಪೋಷಕರಿಗೆ ಕಿವಿಮಾತು ಹೇಳಿದರು. ಶಾಲಾ ಉನ್ನಿತಿಕರಣ ಸೇರಿದಂತೆ ವಿದ್ಯಾರ್ಥಿಗಳಿಗೆ ಬೇಕಾದ ಸವಲತ್ತು ಗೀತಾನಂದ ಫೌಂಡೇಶನ್ ಒದಗಿಸುತ್ತಿದೆ, ಇದರ ಸದುಪಯೋಗ ಪಡೆದು ಸಾಧನೆಯ ಪಾಲು ನಿಮ್ಮದಾಗಿಸಿಕೊಳ್ಳಿ ಎಂದು ಕರೆನೀಡಿದರು.
ಶಾಲಾ ಮುಖ್ಯ ಶಿಕ್ಷಕ ನಿರಂಜನ್ ನಾಯಕ್ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಮನೋವೈದ್ಯ ಡಾ.ಪ್ರಕಾಶ್ ತೋಳಾರ್, ಉಡುಪಿ ಡಯೆಟ್ ಕಾಲೇಜಿನ ಉಪ ಪ್ರಾಂಶುಪಾಲ ಅಶೋಕ್ ಕಾಮತ್ ಭಾಗವಹಿಸಿದರು.
ಮುಖ್ಯ ಅಭ್ಯಾಗತರಾಗಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್ ಬಾಂಝಾ, ,ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್, ಮೊಗವೀರ ಯುವ ಸಂಘ ಕೋಟ ಘಟಕದ ಅಧ್ಯಕ್ಷ ರಂಜೀತ್ ಕುಮಾರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ, ಸಿಆರ್ ಪಿ ಸವಿತ ಕಾರ್ಕಡ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ರಾಮದಾಸ್ ನಾಯಕ್ ಸ್ವಾಗತಿಸಿದರು.
ಕಾರ್ಯಕ್ರಮವನ್ನು ಶಾಲಾ ಶಿಕ್ಷಕ ಶ್ರೀಧರ ಶಾಸ್ತ್ರಿ ನಿರೂಪಿಸಿದರು. ಶಿಕ್ಷಕಿ ಹರ್ಷಿತ ವಂದಿಸಿದರು. ಗೀತಾನಂದ ಸಮಾಜ ಕಾರ್ಯ ವಿಭಾಗದ ರವಿಕಿರಣ್ ಕೋಟ ಸಹಕರಿಸಿದರು.