ಕುಂದಾಪುರ ಮಿರರ್ ಸುದ್ದಿ…
ಬೈಂದೂರು –ಶ್ರೀರಾಮ ಭಜನಾ ಮಂದಿರ ಗಂಗೆಬೈಲು ನಾಗೂರು ಕಿರಿಮಂಜೇಶ್ವರ ಇದರ ವಾರ್ಷಿಕ ಭಜನಾ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಿತು.
ಧಾರ್ಮಿಕ ಭಜನಾ ಕಾರ್ಯಕ್ರಮಕ್ಕೆ ಬೈಂದೂರು ಶಾಸಕರಾದ ಬಿ ಎಂ ಸುಕುಮಾರ್ ಶೆಟ್ಟಿ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ದಕ್ಷಿಣ ಕನ್ನಡ, ಉಡುಪಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಬೈಂದೂರು ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಶ್ರೀಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಇದರ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ, ಉದ್ಯಮಿಗಳಾದ ಗೋವಿಂದ ಬಾಬು ಪೂಜಾರಿ, ಪ್ರಣಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಹೆಗ್ಡೆ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಶ್ಯಾಮಲ ಕುಂದರ್ ಉಪಸ್ಥಿತರಿದ್ದರು.