ಕೋಟ :ಸ್ಪರ್ಧಾ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಿ – ಎಚ್ ಪ್ರಸನ್ನ

0
180

ಕುಂದಾಪುರ ಮಿರರ್ ಸುದ್ದಿ…

ಕೋಟ : ಸ್ಪರ್ಧಾ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಬೇಕಾದ ಅವಶ್ಯಕತೆಯಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಗಮನ ಹರಿಸಿ ಯಶಸ್ಸು ಕಾಣಬೇಕು, ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್ ಪ್ರಸನ್ನ ಅವರು ಹೇಳಿದರು.

Click Here

ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್ ಕೋಟ ಇವರ ಆಶ್ರಯದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಲೆಕ್ಕ ಸಹಾಯಕ, ಗ್ರೇಡ್-1 ಕಾರ್ಯದರ್ಶಿ ಮತ್ತು ಗ್ರಾಮ ಲೆಕ್ಕಿಗರ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಡುತ್ತಿದ್ದರು.
ವಿ-ಶೈನ್ ಕೋಚಿಂಗ್ ಸೆಂಟರ್‍ನ ಸಂಚಾಲಕ ಹರೀಶ್ ಕುಮಾರ್ ಶೆಟ್ಟಿ ಮಾತಾನಾಡಿ ಕರಾವಳಿ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತರಬೇತಿ ಕಾರ್ಯಾಗಾರ ಆಯೋಜಿಸುತ್ತಿದ್ದು, ನಮ್ಮ ಸಂಸ್ಥೆಯಿಂದ ತರಬೇತಿ ಪಡೆದವರು ಹಲವಾರು ಮಂದಿ ಈಗಾಗಲೇ ಉದ್ಯೋಗ ಪಡೆದಿದ್ದಾರೆ, ಪ್ರತಿ ಭಾನುವಾರ ಕೋಟದ ಕಾರಂತ ಥೀಮ್ ಪಾರ್ಕ್‍ನಲ್ಲಿ ಈ ತರಬೇತಿಯು ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಜನ ಪಡೆದುಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಡಾ|| ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ವಿ-ಶೈನ್‍ನ ಗಿರೀಶ್ ಕುಮಾರ್ ಶೆಟ್ಟಿ, ವಿವೇಕ್ ಅಮೀನ್ ಅವರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here