ಗ್ರಾಮಗಳ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಮುಖ್ಯ: ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ
ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಸನ್ಮಾನ ಎನ್ನುವುದು ಎಂದಿಗೂ ನನಗೆ ಖುಷಿ ಕೊಡುವುದಿಲ್ಲ. ನಿಮ್ಮ ಜೊತೆ ಸೇರಿ ನನಗೆ ಇನ್ನಷ್ಟು ಸಮಾಜ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ಸಂತೋಷದ ವಿಷಯವಾಗಿದೆ. ಗ್ರಾಮಗಳ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಬಹಳ ಮುಖ್ಯವಾದದ್ದು. ಈ ನಿಟ್ಟಿನಲ್ಲಿ ಮಿತ್ರಸಂಗಮ ಸಂಸ್ಥೆ ಜನಪರ ಕಾರ್ಯಗಳನ್ನು ಸಮಾಜಕ್ಕೆ ನೀಡುತ್ತಾ ಆಶಕ್ತರಿಗೆ ನೆರವು ನೀಡಿ ಸಮಾಜ ಮುಖಿಯಾಗಿ ತನ್ನದೇ ಆದ ವಿಶಿಷ್ಠ ಸೇವೆಯನ್ನು ನೀಡಿ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.
ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಬೀಜಾಡಿ ಗೋಪಾಡಿ ಮಿತ್ರಸಂಗಮದ ರಜತ ಮಹೋತ್ಸವದ ಅಂಗವಾಗಿ ಊರ ಗೌರವದ ನಮ್ಮೂರ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ಮಿತ್ರಸಂಗಮದ ಗೌರವಧ್ಯಕ್ಷ ವಾದಿರಾಜ್ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದಶಿ೯ ರಾಜೇಶ್ ಆಚಾರ್, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ದೀಪಾನಂದ ಉಪಾಧ್ಯಾಯ ಉಪಸ್ಥಿತರಿದ್ದರು.
ಗಣೇಶ್ ಐಶ್ವರ್ಯ ಬೀಜಾಡಿ ಸ್ವಾಗತಿಸಿದರು. ಮಿತ್ರಸಂಗಮದ ಅಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಪಾಂಡುರಂಗ ಬೀಜಾಡಿ ವಂದಿಸಿದರು.