ಕುಂದಾಪುರ ಮಿರರ್ ಸುದ್ದಿ…
ಕೋಟ: ಕೀರ್ತಿಶೇಷ ಕೋಟ ಶೇಷ ಕಾರಂತರು ಹುಟ್ಟುಹಾಕಿದ ಗಿಳಿಯಾರು ಶಾಂಭವೀ ವಿದ್ಯಾದಾಯನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಇದರ ಶತಮಾನೋತ್ಸವದ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆ ಭಾನುವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ರಾಜಾರಾಮ್ ಐತಾಳ್ ಡಾ.ಶಿವರಾಮ ಕಾರಂತರ ತಂದೆ ಕೀರ್ತಿಶೇಷ ಕಾರಂತರು 1924ರಲ್ಲಿ ರಚನೆಗೈದ ಶಾಂಭವೀ ಶಾಲೆ ಇದೀಗ ಶತಮಾನೋತ್ಸವ ಸಂಭ್ರಮಾಚರಣೆಯಲ್ಲಿದೆ ಈ ದಿಸೆಯಲ್ಲಿ ಅನುದಾನಿತ ಕನ್ನಡ ಮಾಧ್ಯಮ ಶಾಲೆಯಾಗಿ ಸಾಕಷ್ಟು ವಿದ್ಯಾನಿಧಿಗಳನ್ನು ಈ ಸಮಾಜಕ್ಕೆ ಧಾರೆ ಎರೆದಿದೆ. ಇಂಥಹ ಶಿಕ್ಷಣ ಸಂಸ್ಥೆಯನ್ನು ಬಹುಎತ್ತರಕ್ಕೆ ಕೊಂಡ್ಯೋಯಬೇಕಾದರೆ ಹಿಂದಿನ ವಿದ್ಯಾರ್ಥಿಗಳ ಪಾತ್ರ ಅಷ್ಟೆ ಗಣನೀಯವಾದದ್ದು ಈ ದಿಸೆಯಲ್ಲಿ ಶಾಲಾ ಹಳೇ ವಿದ್ಯಾರ್ಥಿ ಸಂಘ ರಚಿಸಿ ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸಬೇಕು ಶತಮಾನೋತ್ಸವದ ಅಂಗವಾಗಿ ಒಂದಿಷ್ಟು ಕಾರ್ಯಕ್ರಮಗಳ ಕಾರ್ಯಸೂಚಿ ಸಿದ್ಧಪಡಿಸಿ,ಹೊಸ ಹೊಸ ಯೋಜನೆಗಳನ್ನು ಪ್ರಚುರಪಡಿಸವ ಬಗ್ಗೆ ಸಭೆಯಲ್ಲಿ ಉಲ್ಲೇಖಿಸಿದರು.
ಶಾಲಾ ಆಡಳಿತ ಮಂಡಳಿಯ ಸಂಚಾಲಕ ಸಚಿನ್ ಕಾರಂತ ಅಧ್ಯಕ್ಷತೆ ವಹಿಸಿದ್ದರು.ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕವಿತಾ ಸದಾನಂದ ಗಿಳಿ,ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ರವೀಂದ್ರ ಜೋಗಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ದಿವಾಕರ್ ರಾವ್ ಸ್ವಾಗತಿಸಿ ನಿರೂಪಿಸಿ ವಂದಿಸಿದರು.ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಂತೋಷ್ ಪ್ರಭು ಸಹಕರಿಸಿದರು.