ಕುಂದಾಪುರ ಮಿರರ್ ಸುದ್ದಿ…
ಉಡುಪಿ :ವಿಧಾನಸಭಾ ಕ್ಷೇತ್ರಕ್ಕೆ ಯಶ್ ಪಾಲ್ ಸುವರ್ಣ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಮತ್ತೊಂದೆಡೆ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಗೆದ್ದಿದ್ದ ಶಾಸಕ ಲಾಲಾಜಿ ಮೆಂಡನ್ ಅವರನ್ನು ಬದಲಾಯಿಸಲಾಗಿದೆ. ಅವರ ಬದಲಾಗಿ, ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಮತ್ತೊಂದೆಡೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈಗಾಗಲೇ ಚುನಾವಣಾ ಕಣಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರಕ್ಕೆ ಕಿರಣ್ ಕುಮಾರ್ ಕೋಡ್ಗಿ ಅವರನ್ನು ಕಣಕ್ಕಿಳಿಸಲಾಗಿದೆ.
ಇನ್ನು ಕಾರ್ಕಳ ಕ್ಷೇತ್ರದಿಂದ ಹಾಲಿ ಶಾಸಕ ಹಾಗೂ ಸಚಿವ ಸುನಿಲ್ ಕುಮಾರ್ ಅವರನ್ನೇ ಮುಂದುವರೆಸಲಾಗಿದೆ. ಉಡುಪಿ ಜಿಲ್ಲೆಯ ಕಡೇಯ ವಿಧಾನಸಭಾ ಕ್ಷೇತ್ರವೆಂದೇ ಗುರುತಿಸಿಕೊಂಡಿರುವ ಬೈಂದೂರು ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿಯ ಘೋಷಣೆಯನ್ನು ಬಿಜೆಪಿ ಮಾಡಿಲ್ಲ.