ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಸಿಎಂ ಬೊಮ್ಮಾಯಿ ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರು ಆಗಮಿಸಿದ ಸಂದರ್ಭದಲ್ಲಿ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಎ. 13ರ ಗುರುವಾರ ಅರೆಶಿರೂರಿನಲ್ಲಿ ನಡೆದಿದೆ.
ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅವಘಡ ತಪ್ಪಿದೆ.
ಹೆಲಿಕಾಪ್ಟರ್ ಫ್ಯಾನ್ ಗಾಳಿಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸ್ಥಳದಲ್ಲಿ ಬೈಂದೂರು ಅಗ್ನಿಶಾಮಕ ದಳದವರಿಂದ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಂಪತಿ ಸಮೇತ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನದ ಪ್ರಾಂಗಣದ ಗರುಡಗಂಬಕ್ಕೆ ಪೂಜೆ ಸಲ್ಲಿಸಿದರು.