ಕುಂದಾಪುರ ಮಿರರ್ ಸುದ್ದಿ…
ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ (80) ಸೋಮವಾರ(ಸೆ.13)ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ನಗರದ ಯೆನಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ಸಿಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಜು.18ರಂದು ಆಸ್ಕರ್ ಫರ್ನಾಂಡೀಸ್ ಅವರು ಮನೆಯಲ್ಲಿ ಯೋಗ ಮಾಡುತ್ತಿದ್ದ ಸಮಯದಲ್ಲಿ ಜಾರಿ ಬಿದ್ದಿದ್ದರು. ನಂತರ ಮಾಮೂಲಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರೆಳಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿದ್ದು ತಿಳಿದುಬಂದಿತ್ತು. ನಂತರ ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.