ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯ ಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡೀಸ್ ಅವರ ನಿಧನಕ್ಕೆ ವಿಧಾನಪರಿಷತ್‍ನ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.
ಉಡುಪಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಹಾಗೂ ರಾಜ್ಯಸಭಾ ಸದಸ್ಯರಾಗಿ ಅನೇಕ ವರ್ಷಗಳ ಕಾಲ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಸ್ಕರ್ ಫೆರ್ನಾಂಡೀಸ್ ಅವರು ತಮ್ಮ ಸರಳ ವ್ಯತಕ್ತಿತ್ವದಿಂದ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.
ಕೇಂದ್ರ ಸರ್ಕಾರದ ಸಚಿವರಾಗಿದ್ದ ದಿನಗಳಲ್ಲಿ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಭಾವಿ ಹುದ್ದೆಗಳನ್ನು ಹೊಂದಿದ್ದ ದಿನಗಳಲ್ಲಿಯೂ ವಿಶೇಷವಾಗಿ ಕರ್ನಾಟಕ ರಾಜ್ಯದ ಹಿತಾಸಕ್ತಿಗಳಿಗಾಗಿ ಅನೇಕ ಕೊಡುಗೆಗಳನ್ನು ನೀಡಿದ್ದರು. ದೇಶ ಸೇವೆಗಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದ ಅವರ ನಿಧನದಿಂದಾಗಿ ಅವಿಭಜಿತ ದ.ಕ ಜಿಲ್ಲೆಯ ಜನರಿಗೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.