ಕುಂದಾಪುರ ಮಿರರ್ ಸುದ್ದಿ…
ಬೈಂದೂರು: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಬುಧವಾರ ಬೆಳಗ್ಗೆ ಕಂಚಿಕಾನ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.
ಚುನಾವಣೆಗೆ ಟಿಕೆಟ್ ಘೋಷಣೆಯಾದ ದಿನದಿಂದಲೂ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದ ಗುರುರಾಜ್ ಗಂಟಿಹೊಳೆಯವರು ಬುಧವಾರ ಬೆಳಗ್ಗೆ ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿಸುವ ಮೂಲಕ ಪ್ರಾಥಮಿಕ ಕರ್ತವ್ಯವನ್ನು ನೆರವೇರಿಸಿದರು.