ಕುಂದಾಪುರ ಮಿರರ್ ಸುದ್ದಿ…
ಉಡುಪಿ : ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆ ಪ್ರಕ್ರಿಯೆ 13 ರಂದು ನಡೆಯಲಿದ್ದು, ಜಿಲ್ಲೆಯಲ್ಲಿನ ಒಟ್ಟು 5 ವಿಧಾನಸಭಾ ಕ್ಷೇತ್ರಗಳ ಮತಎಣಿಕೆಯು ಉಡುಪಿಯ ಸೈಂಟ ಸಿಸಿಲಿ ಶಾಲೆಯಲ್ಲಿ ನಡೆಯಲ್ಲಿದೆ.
ಮತಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ಸಿ.ಐ..ಎಸ್.ಎಫ್ ತುಕಡಿಯಿಂದ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಭದ್ರತೆ ನೀಡಲಾಗಿದೆ.