ಕುಂದಾಪುರ :ಡಾ. ಬಿ.ಬಿ. ಹೆಗ್ಡೆ ಕಾಲೇಜು – “ಫುಡ್ ಆರ್ಟ್” – ಆಹಾರ ಮೇಳ ಕಾರ್ಯಕ್ರಮ

0
353

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಫುಡ್ ಆರ್ಟ್ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ ವಿ.ಕೆ.ಆರ್. ಮತ್ತು ಎಚ್. ಎಮ್.ಎಮ್. ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಭಾರತಿ ನಾಯ್ಕ್ ಕಾರ್ಯಕ್ರಮವನ್ನು ಉದ್ದೇಶಿಸಿ ನೈಸರ್ಗಿಕ ಆಹಾರದ ಮಹತ್ವ ಹಾಗೂ ಅದರ ಉಪಯೋಗದಲ್ಲಿ ಆಹಾರದ ತಯಾರಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾಲೇಜು ವಿದ್ಯಾರ್ಥಿಗಳಲ್ಲಿ ಆಹಾರದ ನಿರ್ವಹಣೆ ಹಾಗೂ ಹಣದ ನಿರ್ವಹಣೆ ಜೀವನದ ಪ್ರಮುಖ ಅಂಗ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

Click Here

Click Here

ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ಭಟ್, ಕಾರ್ಯಕ್ರಮದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಜೋಸ್ಲಿನ್ ಅಲ್ಮೇಡ, ವಿನಯ್ ಹೆಗ್ಡೆ ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಉಪನ್ಯಾಸಕಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

 

Click Here

LEAVE A REPLY

Please enter your comment!
Please enter your name here