ಕುಂದಾಪುರ ಮಿರರ್ ಸುದ್ದಿ…
ಕೋಟ: ಇತ್ತೀಚಿಗೆ ಮಲೇಷಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಸಿಂಗಾಪುರ್ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಒಂದು ಬೆಳ್ಳಿ ಹಾಗೂ ಕಂಚಿನ ಪದಕ ವಿಜೇತ ಕೋಟದ ದಿನೇಶ್ ಗಾಣಿಗ ಇವರಿಗೆ ಹುಟ್ಟೂರು ಕೋಟದಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ಕೋಟದ ಅಮೃತೇಶ್ವರಿ ಸರ್ಕಲ್ ಬಳಿ ಅವರ ಕ್ರೀಡಾ ಅಭಿಮಾನಿಗಳು ಪಟಾಕಿ ಸಿಡಿಸಿ ಹಾರ ಹಾಕಿ ಸ್ವಾಗತಿಸಿಕೊಂಡರು.
ಈ ಸಂದರ್ಭದಲ್ಲಿ ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಆಟೋ ಚಾಲಕರ ಮಾಲಕರ ಸಂಘದ ಅಧ್ಯಕ್ಷ ಅಣ್ಣಪ್ಪ ಪೂಜಾರಿ, ಕೋಟ ಹಿ.ಜಾ.ವೇ ಮಾಜಿ ಅಧ್ಯಕ್ಷ ಸಮತಾ ಸುರೇಶ್ ಗಾಣಿಗ,ಕೋಟ ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ,ಕೋಟ ಅಮೃತೇಶ್ವರಿ ದೇವಸ್ಥಾನದ ಟ್ರಸ್ಟಿ ಚಂದ್ರ ಪೂಜಾರಿ,ಮಾಜಿ ಟ್ರಸ್ಟಿ ಚಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.