ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಉಡುಪಿಯ ಎಮ್.ಜಿ.ಎಮ್. ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕಿ ಸ್ಫೂರ್ತಿ ಎಸ್. ಫೆರ್ನಾಂಡಿಸ್‍ರವರು ರಚಿಸಿದ ಭಾರತೀಯ ಸಂವಿಧಾನ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಮ್.ಜಿ.ಎಮ್. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ| ಕೆ. ಸುರೇಂದ್ರನಾಥ ಶೆಟ್ಟಿ ಬಿಡುಗಡೆಗೊಳಿಸಿದರು.
ಈ ಪುಸ್ತಕವನ್ನು ನೂತನ ರಾಷ್ಟ್ರೀಯ ಶಿಕ್ಷಣಾ ನೀತಿಯ ಅನ್ವಯ ಮಂಗಳೂರು ವಿ.ವಿ. ರೂಪಿಸಿದ ಪಠ್ಯಕ್ರಮಕ್ಕೆ ಅನುಗುಣವಾಗಿ ಮೂರನೇ ಅಥವಾ ನಾಲ್ಕನೇಯ ಸೆಮಿಸ್ಟರ್ ಕಡ್ಡಾಯ ಪತ್ರಿಕೆ (ಂಇಅಅ) ‘ಭಾರತೀಯ ಸಂವಿಧಾನ’ದ ಕುರಿತಾಗಿ ರಚಿಸಲಾಗಿದೆ.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ಪ್ರೀತಿ ಹೆಗ್ಡೆ, ವಿದ್ಯಾರ್ಥಿ ಪ್ರತಿನಿಧಿ ವಿಘ್ನೇಶ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಹಾರ ನಿರ್ವಹಣಾ ವಿಭಾಗದ ಪ್ರಾಧ್ಯಾಪಕಿ ಅವಿತಾ ಕೊರೆಯಾ ನಿರೂಪಿಸಿದರು.