ಕುಂದಾಪುರ ಮಿರರ್ ಸುದ್ದಿ…
ಕೋಟ: ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ಮಹಾತ್ಮ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೋಡಿ ಕನ್ಯಾಣದ 3 ಕೆರೆ ಹೂಳೆತ್ತುವ ಕಾಮಗಾರಿ, ಕೃಷಿ ಭೂಮಿ, ರಸ್ತೆ ಕಾಮಗಾರಿ ಹಾಗೂ ಶಾಲಾ ಕಾಂಪೌಂಡ್ ಕಾಮಗಾರಿಯನ್ನು ಬ್ರಹ್ಮಾವರ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಮಹೇಶ್ ಹಾಗೂ ಜಿಲ್ಲಾ ಪಂಚಾಯತ್ ಎ.ಡಿ.ಪಿ.ಸಿ ವಿಜಯ್ ಶ್ಯಾಮ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.
ಕೋಡಿ ಗ್ರಾಮ ಪಂಚಾಯತ್‍ನಿಂದ ಮಹಾತ್ಮ ಗಾಂಧೀ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಸುಮಾರು 86 ಮಹಿಳೆಯರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಪಂಚಾಯತ್ ಅಧ್ಯಕ್ಷ ಪ್ರಭಾಕರ ಮೆಂಡನ್, ಪಂಚಾಯತ್ ಕಾರ್ಯದರ್ಶಿ ಉಷಾಶೆಟ್ಟಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.