ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕೋಟದ ಉಪ್ಲಾಡಿ ಸಮೀಪ ತಸ್ಮಯಿ ರೆಸಿಡೆನ್ಸಿ ಅಪಾರ್ಟ್ಮೆಂಟ್ ನ ವಿದ್ಯುತ್ ಟ್ರಾನ್ಸ್ ಫಾರ್ಮರ್ ದುರಸ್ಥಿ ವೇಳೆ ಭಾನುವಾರ ಮಧ್ಯಾಹ್ನ ಶಾಕ್ ಹೊಡೆದ ಪರಿಣಾಮ ಕೋಟ ಮೆಸ್ಕಾಂ ಪವರ್ ಮ್ಯಾನ್ ಗಳಾದ ರಮೇಶ್ (27) ಹಾಗೂ ಸುದರ್ಶನ್ (26) ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಪರಿಣಾಮ ಇಬ್ಬರೂ ಶಾಕ್ ನಿಂದ ಮುಖ ಹಾಗೂ ಕೈ ಭಾಗ ಸುಟ್ಟು ಹೋಗಿದ್ದು ಸಹಾಯಕ ಪವರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ರಮೇಶ್ ಗಂಭೀರ ಗಾಯಗೊಂಡಿದ್ದಾರೆ.
ತಕ್ಷಣ ನಾಗರಾಜ್ ಪುತ್ರನ್ ಕೋಟ ಜೀವನ್ ಮಿತ್ರ ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಾಥಮಿಕ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್, ಜಯಕರ್ನಾಟಕ ಅಧ್ಯಕ್ಷ ಸತೀಶ್ ಪೂಜಾರಿ ಹಾಗೂ ಭರತ್ ಗಾಣಿಗ ಮತ್ತು ಮೆಸ್ಕಾಂ ಪವರ್ ಮ್ಯಾನ್ ಉಮ್ಮರ್ ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ.
ರಮೇಶ್ ಹಾಗೂ ಸುದರ್ಶನ್ ಇಬ್ಬರೂ 2016ರಲ್ಲಿ ಖಾಯಂ ಪವರ್ ಮ್ಯಾನ್ ಗಳಾಗಿ ಸೇರ್ಪಡೆಗೊಂಡಿದ್ದು, ಕಳೆದ ಏಳು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಮಲಲೆಗಾಲದ ಆರಂಭದಲ್ಲಿಯೇ ಈ ಘಟನೆ ನಡೆದಿರುವುದು ಇಲಾಖೆಯಲ್ಲಿ ಆತಂಕ ಮೂಡಿಸಿದೆ. ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯ. ಘಟನೆಯ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.