ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕಾಲೇಜಿನ ಯುವ ರೆಡ್‍ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ, ಜೆಸಿಐ ಕುಂದಾಪುರ ಸಿಟಿ ಹಾಗೂ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನ ದಿನಾಚರಣೆಯ ಪ್ರಯುಕ್ತ ನಡೆದ ರಕ್ತದಾನ ಶಿಬಿರವನ್ನು ಕುಂದಾಪುರದ ತಹಶೀಲ್ದಾರರಾದ ಶೋಭಲಕ್ಷ್ಮೀ ಉದ್ಘಾಟಿಸಿದರು.
ಈ ಸಂದರ್ಭ ರಕ್ತದಾನದ ಮಹತ್ವದ ಕುರಿತು ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಸೀತಾರಾಮ ನಕ್ಕತ್ತಾಯ, ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಚೇರ್‍ಮೆನ್ ಜಯಕರ್ ಶೆಟ್ಟಿ, ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷೆ ಡಾ| ಸೋನಿ ಡಿಕೋಸ್ತಾ, ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಸದಸ್ಯರಾದ ಶಿವರಾಮ್ ಶೆಟ್ಟಿ, ಸೀತರಾಮ ಶೆಟ್ಟಿ, ಮುತ್ತಯ್ಯ ಶೆಟ್ಟಿ, ಗಣೇಶ್ ಆಚಾರ್, ಸದಾನಂದ ಶೆಟ್ಟಿ, ಅಬ್ದುಲ್ ಬಶೀರ್ ಹಾಗೂ ಕುಂದಾಪುರ ಸಿಟಿ ಜೆಸಿಐನ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಪೂರ್ವಾಧ್ಯಕ್ಷರಾದ ರಾಘವೇಂದ್ರ ಚರಣ್ ನಾವಡ, ವಿಜಯ್ ಭಂಡಾರಿ, ಪ್ರಶಾಂತ್ ಹವಾಲ್ದಾರ್, ಜೇಸಿರೆಟ್ ಅಧ್ಯಕ್ಷೆ ಪ್ರೇಮ, ಪೂರ್ವ ಜೇಸಿರೆಟ್ ಅಧ್ಯಕ್ಷೆ ಸುವರ್ಣಾ ಅಲ್ಮೇಡಾ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಂಯೋಜಕರಾದ ಚೇತನ್ ಶೆಟ್ಟಿ ಕೋವಾಡಿ, ದೀಪಾ ಪೂಜಾರಿ ಉಪಸ್ಥಿತರಿದ್ದರು.
ಕಾಲೇಜಿನ ಯುವ ರೆಡ್‍ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ಅವಿತಾ ಎಮ್. ಕೊರೆಯಾ ನಿರೂಪಿಸಿದರು.