ಕುಂದಾಪುರ :ವಿದ್ಯಾರ್ಥಿಗಳು ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಶಾಲಾಸಂಘಗಳ ಪಾತ್ರ ಮಹತ್ತರವಾದುದು – ಜಯಶೀಲ ಶೆಟ್ಟಿ

0
177

ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಶಿಕ್ಷಣವೆನ್ನುವುದು ಪ್ರಾಯೋಗಿಕ ಮತ್ತು ಅನುಭವಾತ್ಮಕವಾಗಬೇಕು, ಇದರಿಂದ ಮೌಲ್ಯಾದರ್ಶಗಳು ಮತ್ತು ವರ್ತನೆ ಬದಲಾವಣೆಯ ಅನ್ವಯ ಸಾಧ್ಯವಾಗುತ್ತದೆ. ಶಾಲಾ ಕಾಲೇಜುಗಳಲ್ಲಿರುವ ವಿವಿಧ ವಿಷಯವಾರು ಸಂಘಗಳ ಸಾಂಘಿಕ ಸಹಪಠ್ಯ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ಹುದುಗಿದ ಸೃಜನಶೀಲತೆ ಹೊರಹೊಮ್ಮುತ್ತದೆ, ಉನ್ನತ ವ್ಯಕ್ತಿತ್ವ ರೂಪುಗೊಳ್ಳುತ್ತದೆ, ತನ್ಮೂಲಕ ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ವಿವಿಧ ಸಂಘಗಳ ಪಾತ್ರ ಮಹತ್ತರವಾದುದು ಎಂದು ಹಾಜಿ ಕೆ ಮೊಹಿದ್ದೀನ್ ಬ್ಯಾರಿ ಸ್ಮಾರಕ ಕನ್ನಡ ಪ್ರೌಢಶಾಲಾ ಮುಖ್ಯಸ್ಥರಾದ ಜಯಶೀಲ ಶೆಟ್ಟಿ ಹೇಳಿದರು. ಅವರು ಬ್ಯಾರೀಸ್ ಬಿ.ಎಡ್ ಕಾಲೇಜಿನಲ್ಲಿ ಆಯೋಜಿಸಲಾದ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟಕರಾಗಿ ಮಾತನಾಡಿದರು.

Click Here

ಪ್ರಾಧ್ಯಾಪಕರಾದ ಅನಂತ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಹಿರಿಯ ಪ್ರಾಧ್ಯಾಪಕರಾದ ಪ್ರವೀಣ್ ಕುಮಾರ್ ಕೆ.ಪಿ ವಿವಿಧ ಸಂಘಗಳ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಭೋಧಿಸಿದರು. ಪ್ರಾಧ್ಯಾಪಕರಾದ ಅಜಿತ್ ಕಾಮತ್ ಸಂಘಗಳ ಪರಿಚಯಾತ್ಮಕ ಕಾರ್ಯಕ್ರಮ ನಡೆಸಿಕೊಟ್ಟರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಅಧ್ಯಕ್ಷತೆ ವಹಿಸಿದ್ದರು,

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ. ಸುರೇಶ್ ಶೆಟ್ಟಿ, ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು, ಪ್ರಾಧ್ಯಾಪಕರಾದ ವೆಂಕಟೇಶ್ ಎಸ್ ಸ್ವಾಗತಿಸಿದರು, ಶಂಶಾದ್ ವಂದಿಸಿದರು, ಬಿ.ಎಡ್ ಪ್ರಶಿಕ್ಷಣಾರ್ಥಿ ಸುಧಾ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here