ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

0
334

ಕುಂದಾಪುರ ಮಿರರ್ ಸುದ್ದಿ…


ಬೈಂದೂರು :ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಶುಕ್ರವಾರ ಭೇಟಿ ನೀಡಿ, ಕಡಲ್ಕೊರೆತದಿಂದ ಈಗಾಗಲೇ ಆಗಿರುವ ಹಾನಿಯ ಬಗ್ಗೆ ಮೀನುಗಾರರ ಮುಖಂಡರೊಂದಿಗೆ ಚರ್ಚಿಸಿದರು.

Click Here

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತೀ ವರ್ಷ ಮರವಂತೆಯಲ್ಲಿ ಕಡಲ್ಕೊರೆತ ಉಂಟಾಗುತ್ತದೆ. ಇದಕ್ಕೆ ಶಾಶ್ವತ ತಡೆಗೋಡೆ ನಿರ್ಮಿಸುವ ಸಲುವಾಗಿ ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಗಳಾಗಿರುವ ಸಂದರ್ಭದಲ್ಲಿ ಬಜೆಟ್‍ನಲ್ಲಿಯೇ 82 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಸಿಆರ್.ಜೆಡ್ ಇತ್ಯಾದಿ ತಾಂತ್ರಿಕ ಕಾರಣಗಳಿಂದ ಸ್ವಲ್ಪ ವಿಳಂಬವಾಯಿತು. ಆ ಸಮಸ್ಯೆ ಪರಿಹಾರ ಮಾಡುವಲ್ಲಿ ನಾನು ಗಮನ ನೀಡುತ್ತೇನೆ. ಈಗಾಗಲೇ ರಾಜ್ಯ ಸಚಿವರಾದ ಮಾಂಕಾಳ ವೈದ್ಯ ಅವರನ್ನು ಸಂಪರ್ಕಿಸಿ ವಿಷಯನ್ನು ಅವರ ಗಮನಕ್ಕೂ ತಂದಿದ್ದೇವೆ. ಹಾಗೆಯೇ ವಾರದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಭೇಟಿ ಮಾಡಿದ್ದರು. ನಾನು ಕೂಡಾ ಭೇಟಿ ಮಾಡಿ ಸಮಸ್ಯೆಯನ್ನು ಅವರ ಗಮನಕ್ಕೂ ತಂದಿದ್ದೇನೆ. ಈಗ ತಾತ್ಕಾಲಿಕವಾಗಿ ಕ್ರಮ ತಗೆದುಕೊಳ್ಳಬೇಕಾಗಿದೆ. ಕಳೆದ ವರ್ಷ ಬಸವರಾಜ ಬೊಮ್ಮಾಯಿಯವರು ಇಲ್ಲಿಗೆ ಭೇಟಿಕೊಟ್ಟಂತಹ ಸಂದರ್ಭದಲ್ಲಿ ತಾತ್ಕಾಲಿಕ ಕ್ರಮಕ್ಕೆ 4-5 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ ತುರ್ತು ತಾತ್ಕಾಲಿಕ ಕ್ರಮದ ಅಗತ್ಯವಿದೆ. ಸರ್ಕಾರ ಸ್ಪಂದಿಸುತ್ತದೆ ಎನ್ನುವ ವಿಶ್ವಾಸವಿದೆ. ಹಾಗೇ ಶಾಶ್ವತ ಪರಿಹಾರಕ್ಕೆ ಮುಂದಿನ ತಿಂಗಳು ನಡೆಯುವ ಕೇಂದ್ರದ ಅಧಿವೇಶನದ ಸಂದರ್ಭದಲ್ಲಿ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ಗುರುರಾಜ ಗಂಟಿಹೊಳೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ , ತಹಶೀಲ್ದಾರ್ ಶ್ರೀಕಾಂತ್, ಶ್ರೀನಿವಾಸ ಮೂರ್ತಿ, ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ, ಆನಂದ ಖಾರ್ವಿ, ಪ್ರಿಯದರ್ಶಿನಿ ದೇವಾಡಿಗ, ಮೀನುಗಾರರ ಮುಖಂಡರಾದ ವಾಸುದೇವ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here