ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ತಾಲೂಕು ಕಚೇರಿಯಲ್ಲಿ 94ಸಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಹಕ್ಕುಪತ್ರ ವಿತರಣೆಗೆ ಸಿದ್ಧವಾಗಿದ್ದು ನೀತಿ ಸಂಹಿತೆ ಇರುವುದರಿಂದ ಹಕ್ಕುಪತ್ರ ವಿತರಿಸಲು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಇಲಾಖೆ ಡಿನೋಟಿಸ್ ಮತ್ತು ಆರ್.ಟಿ.ಸಿಯನ್ನು ಒಟ್ಟಿಗೆ ಫಲಾನುಭವಿಗೆ ನೀಡಿದಾಗ ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶೋಭಾಲಕ್ಷ್ಮೀ, ಗ್ರೇಡ್-2 ತಹಶೀಲ್ದಾರ್ ಸಂತೋಷ್ ಭಂಡಾರಿ, ಗಿರಿಜಾ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಪ ತಹಶೀಲ್ದಾರ್ ವಿನಯ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.