ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ಮಾದಕ ದ್ರವ್ಯ ವಿರೋಧಿ ದಿನ ಕಾರ್ಯಕ್ರಮ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಸಮಾಜಸೇವಾ ಸಂಘದ ಆಶ್ರಯದಲ್ಲಿನಡೆದ ಮಾದಕ ದ್ರವ್ಯ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೋಟ ಆರಕ್ಷಕ ಠಾಣೆಯ ಠಾಣಾಧಿಕಾರಿ ಶಂಭುಲಿಂಗಯ್ಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಇಂದು ಯುವ ಸಮುದಾಯ ಎಳೆ ವಯಸ್ಸಿನಲ್ಲೇ ಅತ್ಯಂತ ಅಪಾಯಕಾರಿಯಾದ ಮಾದಕ ವಸ್ತುಗಳ ಸೇವನೆಗೈಯುತ್ತಿರುವುದು ದುರದೃಷ್ಟಕರ ಇದರಿಂದ ಸಾಕಷ್ಟು ಸಮಸ್ಯೆಗಳು ಸೃಷ್ಠಿಯಾಗುತ್ತಿವೆ, ವಿದ್ಯಾರ್ಥಿಗಳು ಈ ವ್ಯಸನದಿಂದ ಮುಕ್ತರಾಗಬೇಕು ಎಂದು ತಿಳಿಸಿ ವಿವಿಧ ಪ್ರಕಾರದ ಮಾದಕ ವಸ್ತು ಮತ್ತು ಅದರ ದುಷ್ಪರಿಣಾಮಗಳನ್ನು ಪವರ್ ಪಾಯಿಂಟ್ ಪ್ರಸೆಂಟೇಶನ್ ಮೂಲಕ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ ಪ್ರಾಸ್ತಾವನೆಗೈದು ಸ್ವಾಗತಿಸಿದರು. ಉಪನ್ಯಾಸಕ ಅಶೋಕ ಕುಮಾರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.