ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜೂ. 26ರಂದು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಂಡಾರ್ ಕಾರ್ಸ್ ಕಾಲೇಜಿನ ಉಪನ್ಯಾಸಕರು ಹಾಗೂ ಮನಶಾಸ್ತ್ರ ಸಲಹೆಗಾರರಾದ ರಾಜೇಶ್ವರಿ .ಆರ್. ಶೆಟ್ಟಿ ಯವರು ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಹಾಗೂ ಯುವ ಜನರು ನಮ್ಮ ದೇಶವನ್ನು ಮಾದಕ ದ್ರವ್ಯ ಸೇವನೆಯಿಂದ ಯಾವ ರೀತಿ ಮುಕ್ತಗೊಳಿಸಬಹುದು ಎನ್ನುವುದರ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿಯವರು ಅಧ್ಯಕ್ಷತೆ ಯನ್ನು ವಹಿಸಿದ್ದರು.
ಸಂಖ್ಯಾಶಾಸ್ತ್ರ ಉಪನ್ಯಾಸಕಿ ವಿದ್ಯಾಶ್ರೀ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ ವಂದಿಸಿದರು. ವ್ಯವಹಾರ ಅಧ್ಯಯನದ ಉಪನ್ಯಾಸಕಿ ನಿಧಿ ಕಾರ್ಯಕ್ರಮ ನಿರೂಪಿಸಿದರು.