ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕುಂದಾಪುರದ ಶ್ರೀ ವೆಂಕಟರಮಣ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಮಹಿಮ. ಎಂ ಇವಳು 2022- 23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 619 ಅಂಕಗಳನ್ನು ಪಡೆದು ದಾವಣಗೆರೆಯ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ನೀಡುವ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ತಿಳಿಸಿದ್ದಾರೆ.
ಜುಲೈ 30ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಂಭ್ರಮದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮಹಿಮ.ಎಂ ಇವರು ಗೋಪಾಡಿಯ ಮಂಜುನಾಥ ಹಾಗೂ ಯಶೋದಾ ದಂಪತಿಯ ಪುತ್ರಿಯಾಗಿದ್ದಾರೆ