ರೈತರನ್ನು ಗುರುತಿಸುವ ಕಾರ್ಯ ಶ್ರೇಷ್ಠವಾದದ್ದು- ಪ್ರತಾಪ್ ಶೆಟ್ಟಿ ಸಾಸ್ತಾನ
ಕುಂದಾಪುರ ಮಿರರ್ ಸುದ್ದಿ…
ಕೋಟ: ರೈತರನ್ನು ಗುರುತಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ ಹೇಳಿದರು.
ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೈತಧ್ಚನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು ಇವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 27ನೇ ಸರಣಿ ಕಾರ್ಯಕ್ತಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ ಕೃಷಿ ಕ್ಷೇತೃದಲ್ಲಿ ಸಾಂಪ್ರದಾಯಿಕ ಕೃಷಿ ಕಾಯಕಕ್ಕೆ ಹೆಚ್ಚು ಒತ್ತು ನೀಡಿದವರಲ್ಲಿ ಮೋಹನ್ ಪೂಜಾರಿ ಓರ್ವರು ,ಆಧುನಿಕತೆ ನಡುವೆ ಸಾಂಪ್ರದಾಯಿಕ ಕೃಷಿಯನ್ನು ಜಗತ್ತಿಗೆ ಪಸರಿಸುವ ಕಾರ್ಯ ಶ್ರೇಷ್ಠತೆಯನ್ನು ಪಡೆದುಕೊಳ್ಳುತ್ತದೆ. ಒಂದು ಸಂಘಟನೆ ಮನೆ ಮನೆಗೆ ತೆರಳಿ ರೈತರನ್ನು ಹುಡುಕಿ ಅರ್ಥಪೂರ್ಣವಾಗಿ ಗೌರವುಸುವ ಮಹತ್ಕಾರ್ಯಯನ್ನು ಕೊಂಡಾಡಿದರು. ರೈತನೆ ಈ ದೇಶದ ಬೆನ್ನೆಲುಬು ಎನ್ನುವ ಪರಿಪಾಠದ ಜಗತ್ತಿನಲ್ಲಿ ನಾವುಗಳಿದ್ದೇವೆ, ಆದರೆ ಅವರ ಆತ್ಮಸ್ಥೈರ್ಯ ತುಂಬುವ ಕೆಲಸ ಸರಕಾರದಿಂದ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ಈ ವೇಳೆ ಸಾಧಕ ಕೃಷಿಕ ಪಾಂಡೇಶ್ವರ ಮೂಡಹಡು ಮೋಹನ್ ಪೂಜಾರಿ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಪಾಂಡೇಶ್ವರ ರಕ್ತೇಶ್ವರಿ ದೇವಸ್ಥಾನದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ರಂಗಕರ್ಮಿ ಅಲ್ವಿನ್ ಅಂದ್ರಾದೆ, ಪಾಂಡೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷೆ ಕಲ್ಪನಾ ದಿನಕರ್, ಸದಸ್ಯರಾದ ಸುಜಾತ ವೆಂಕಟೇಶ್ ,ಪಾಂಡೇಶ್ವರ ಗ್ರಾಮಪಂಚಾಯತ್ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲೀಲಾವತಿ ಗಂಗಾಧರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಂಡೇಶ್ವರ ಒಕ್ಕೂಟದ ಅಧ್ಯಕ್ಷೆ ಸೀಮಾ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್, ಪಾಂಡೇಶ್ವರ ಶಾಲೆಯ ಮುಖ್ಯಶಿಕ್ಷಕ ಶೇಖರ್ ಪೂಜಾರಿ, ಪಾಂಡೇಶ್ವರ ಮೂಡಹಡು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಜಯ ಆಚಾರ್, ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ಯಾಮಲ ವಿಜಯ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಸ್ಥಳೀಯ ಕೃಷಿಕರಾದ ಬಲರಾಮ ಸೋಮಯಾಜಿ, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ ಜಯರಾಮ ಶೆಟ್ಟಿ, ನಿರೂಪಕ ಅಭಿಜಿತ್ ಪಾಂಡೇಶ್ವರ,ಸ್ಥಳೀಯರಾದ ಉಷಾ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಶಕೀಲ ನಾಗರಾಜ್ ಪೂಜಾರಿ ಸ್ವಾಗತಿಸಿದರು. ಕಾರ್ಯದರ್ಶಿ ಲಲಿತಾ ಗಿಳಿಯಾರು ಸನ್ಮಾನಪತ್ರ ವಾಚಿಸಿದರು. ಸದಸ್ಯೆ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿದರು.
ನಂತರ ಗಿಡ ವಿತರಿಸಿ ವನಮಹೋತ್ಸವದ ಮೂಲಕ ಗಿಡನೆಡಲಾಯಿತು.