ಕುಂದಾಪುರ :ಪತ್ರಕರ್ತರ ಮೇಲೆ ಜನರಿಟ್ಟ ನಂಬಿಕೆ ಉಳಿಸುವ ಕೆಲಸ ಮಾಡಬೇಕಿದೆ – ಸಹಾಯಕ ಆಯುಕ್ತೆ ಎಸ್.ಆರ್.ರಶ್ಮಿ

0
343

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಪತ್ರಿಕೋದ್ಯಮ ಬಹಳ ಪವಿತ್ರವಾದ ಕ್ಷೇತ್ರವಾಗಿದ್ದು ಪತ್ರಿಕಾ ಮಾದ್ಯಮ ಕ್ಷೇತ್ರದ ಬಗ್ಗೆ ಜನರಲ್ಲಿ ನಂಬಿಕೆ ಇದೆ. ಆ ನಂಬಿಕೆಯ ಆಧಾರದಿಂದಲೇ ಪತ್ರಿಕೊದ್ಯಮ ಕ್ಷೇತ್ರ ಇಷ್ಟೊಂದು ಬೆಳೆದಿರುವುದು. ಜನರ ನಂಬಿಕೆ, ವಿಶ್ವಾಸವನ್ನು ಉಳಿಸಿಕೊಂಡು ಮುನ್ನೆಡೆಯುವ ಮಹತ್ವದ ಜವಬ್ದಾರಿ ಪತ್ರಕರ್ತರ ಮೇಲಿದೆ ಎಂದು ಕುಂದಾಪುರದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಹೇಳಿದರು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಭಂಡಾರ್ಕಾರ್ಸ್ ಆಟ್ರ್ಸ್ ಮತ್ತು ಸಾಯನ್ಸ್ ಕಾಲೇಜು ಪತ್ರಿಕೋದ್ಯಮ ವಿಭಾಗ ಕುಂದಾಪುರ, ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಇವರ ಸಹಯೋಗದೊಂದಿಗೆ ಕೋಯಾಕುಟ್ಟಿ ಹಾಲ್‍ನಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಗ್ರಾಮೋಫೋನ್ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

Click Here

Click Here

ಸರಕಾರಿ ಕಾರ್ಯಕ್ರಮಗಳ ಮಾಹಿತಿ ಜನರಿಗೆ ಅಷ್ಟೇ ಪರಿಣಾಮಕಾರಿಯಾಗಿ ತಲುಪಿದಾಗ ಆ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗುತ್ತದೆ. ಇವತ್ತು ನಮ್ಮನ್ನು ನಮ್ಮನವರೆ ನಂಬುವುದಕ್ಕಿಂತ ಮಾಧ್ಯಮಗಳನ್ನು ನಂಬುತ್ತಾರೆ. ಕರಾವಳಿ ಜಿಲ್ಲೆಯ ಪತ್ರಿಕೋದ್ಯಮ ಉತ್ತಮ ತಳಹದಿಯ ಮೇಲೆ ಸಾಗುತ್ತಿದೆ. ಈ ಭಾಗದ ಪತ್ರಕರ್ತರು ಸುದ್ಧಿಯ ಬಗ್ಗೆ ಅಧ್ಯಯನ ಮಾಡಿ ಬಳಿಕವೇ ಪ್ರಕಟಿಸುತ್ತಾರೆ. ಇವತ್ತು ಸಾಕಷ್ಟು ಟಿವಿ ವಾಹಿನಿಗಳು, ಪತ್ರಿಕೆಗಳು ಬೆಳೆದು ಬಂದಿವೆ. ಪತ್ರಿಕೊದ್ಯಮ ಕ್ಷೇತ್ರ ಇಷ್ಟೊಂದು ವೇಗವಾಗಿ ಬೆಳೆಯಲು ಜನರು ಈ ಕ್ಷೇತ್ರದ ಮೇಲೆ ಇಟ್ಟಿರುವ ನಂಬಿಕೆಯೇ ಕಾರಣ. ಯಾವುದೇ ಪೇಯ್ಡ್ ನ್ಯೂಸ್‍ಗಳಿಗೆ ಒಳಗಾಗದೇ ಮಾದ್ಯಮ ಕ್ಷೇತ್ರ ಜನರ ನಂಬಿಕೆಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಾಮಾಜಿಕ ಜಾಲಾತಾಣವನ್ನು ಉದ್ಘಾಟಿಸಿದ ಕುಂದಾಪುರದ ಡಿವೈಎಸ್‍ಪಿ ಬೆಳ್ಳಿಯಪ್ಪ ಕೆ.ಯು ಮಾತನಾಡಿ, ಪತ್ರಿಕಾ ಧರ್ಮವನ್ನು ಉಳಿಸಿಕೊಂಡು ಹೋಗುವ ಕೆಲಸ ಇವತ್ತು ಪತ್ರಕರ್ತರು ಮಾಡುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಫುಲವಾದ ಅವಕಾಶಗಳಿವೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ನಿರಂತರ ಓದುವ ಹವ್ಯಾಸ ಬೆಳೆಸಿಕೊಂಡಾಗ ಪತ್ರಿಕಾರಂಗದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.

ಹಿರಿಯ ಪತ್ರಕರ್ತರಾದ ಯು.ಕೆ.ಕುಮಾರನಾಥ್ ಹಾಗೂ ಎಸ್.ಜನಾರ್ದನ್ ಮರವಂತೆ ವಿಶೇಷ ಉಪನ್ಯಾಸ ನೀಡಿದರು.
ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಿದ್ದರು. ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ ನಾರಾಯಣ ಶೆಟ್ಟಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಂ.ಗೊಂಡ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷ ರಾಜೇಶ ಶೆಟ್ಟಿ ಅಲೆಯೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿನಯ ಪಾಯಸ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತೋತ್ಸವ ಸಮಿತಿಯ ಜಯಕರ ಸುವರ್ಣ, ಭಂಡಾರ್ಕಾರ್ಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸುಮಲತಾ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಶಶಿಧರ ಹೆಮ್ಮಾಡಿ ಸ್ವಾಗತಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸುಮಲತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಪ್ರಶಾಂತ್ ಪಾದೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪಟ್ಟಿ ವಾಚಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಪ್ರಾಯೋಜರನ್ನು ಗೌರವಿಸಲಾಯಿತು. ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್.ಬೀಜಾಡಿ ವಂದಿಸಿದರು. ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಕಾರ್ಯಕ್ರಮ ನಿರ್ವಹಿಸಿದರು.

Click Here

LEAVE A REPLY

Please enter your comment!
Please enter your name here