ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸ್ಟಾಫ್ ವೆಲ್‍ಫೇರ್ ಅಸೋಸಿಯೇಶನ್ ಆಯೋಜಿಸಿದ ಸಿಬ್ಬಂದಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಿದ ಪ್ರಾಧ್ಯಾಪಕರನ್ನು ಶ್ಲಾಘಿಸಿದರು.
ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಬೀಳ್ಕೊಡುಗೆ ಸ್ವೀಕರಿಸಿದ ವಾಣಿಜ್ಯ ಪ್ರಾಧ್ಯಾಪಕಿಯರಾದ ಸುಶ್ಮಿತಾ ಸಾಲಿಗ್ರಾಮ, ಅರ್ಪಣಾ ಶೆಟ್ಟಿ, ಗಣಿತ ಶಾಸ್ತ್ರದ ಪ್ರಾಧ್ಯಾಪಕಿ ಮೇಘನಾ ಹೆಬ್ಬಾರ್ ಮತ್ತು ಭೌತಶಾಸ್ತ್ರ ಪ್ರಾಧ್ಯಾಪಕಿ ಸೌಮ್ಯ ಗಾಣಿಗ ಸಂಸ್ಥೆಯಲ್ಲಿನ ತಮ್ಮ ಸೇವಾನುಭವನ್ನು ಹಂಚಿಕೊಂಡರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಹಾಗೂ ರಸಾಯನಶಾಸ್ತ್ರ ಪ್ರಾಧ್ಯಾಪಕಿ ರಕ್ಷಿತಾ ಶೆಟ್ಟಿ ಅನಿಸಿಕೆ ಹಂಚಿಕೊಂಡರು.
ಕಾಲೇಜಿನ ಗಣಿತಶಾಸ್ತ್ರ ಪ್ರಾಧ್ಯಾಪಕಿ ನಿರ್ಮಲಾ ಪ್ರಾರ್ಥಿಸಿ, ಸಿಬ್ಬಂದಿ ಸಂಘದ ಸಂಯೋಜಕ ಮಹೇಶ್ ನಾಯ್ಕ್ ವಂದಿಸಿದರು. ವಾಣಿಜ್ಯ ಉಪನ್ಯಾಸಕ ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿದರು.