ಕುಂದಾಪುರ ಮಿರರ್ ಸುದ್ದಿ…
ಕೋಟ: ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ಅಡಿಯಲ್ಲಿ ಎಲ್ಲಾ ಅರ್ಹ ಹೆಣ್ಣು ಮಕ್ಕಳ ಹೆಸರಲ್ಲಿ ಖಾತೆ ತೆರೆದ ಪ್ರಯುಕ್ತ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪೂರ್ಣ ಸುಕನ್ಯಾ ಸಮೃದ್ಧಿ ಶಾಲೆಯಾಗಿ ಭಾರತೀಯ ಅಂಚೆ ಇಲಾಖೆ ವತಿಯಿಂದ ಗುರುತಿಸಲಾಗಿದೆ.
ಈ ಸಂದರ್ಭದಲ್ಲಿ ಉಡುಪಿ ಉತ್ತರ ಉಪವಿಭಾಗದ ಅಂಚೆ ನಿರೀಕ್ಷಕರಾದ ಶಂಕರ ಲಮಾಣಿ ಶಾಲಾ ಮುಖ್ಯ ಶಿಕ್ಷಕರಾದ ಶೇಖರ ಕುಮಾರರಿಗೆ ಪ್ರಮಾಣ ಪತ್ರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಂಚೆ ಮೇಲ್ವಿಚಾರಕರಾದ ಸುಭಾಷ್ ತಿಂಗಳಾಯ, ಹೆಸಕುತ್ತೂರು ಬ್ರಾಂಚ್ ಪೋಸ್ಟ್ ಮಾಸ್ಟರ್ ಶಂಕರ ಶೆಟ್ಟಿ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.