ಕುಂದಾಪುರ ಮಿರರ್ ಸುದ್ದಿ…
ಕೋಟ: ಪಾಂಡೇಶ್ವರ ಗ್ರಾಮ ಪಂಚಾಯತ್ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಆಗಸ್ಟ್ 14 ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಜರುಗಲಿದೆ.
ನೂತನ ಕಟ್ಟಡವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ನೆರವೇರಿಸಲಿದ್ದು, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರಾದ ಪ್ರಿಯಾಂಕ ಖರ್ಗೆ ಉಪಸ್ಥಿತರಿರಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್ ಎಲ್ ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಪಂಚಾಯತ್ ಅಧ್ಯಕ್ಷೆ ಕಲ್ಪನಾ ದಿನಕರ ಪೂಜಾರಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಮ್ ಟಿ ರೇಜು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.