ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ.ಹಿ.ಪ್ರಾ.ಶಾಲೆ ಕೊಂಡಳ್ಳಿಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಭಾಸ್ಕರ ನಾಯ್ಕ ಧ್ವಜಾರೋಹಣಗೈದರು.
ಈ ಸಂದರ್ಭದಲ್ಲಿ ಪ್ರತಿ ವರ್ಷದಂತೆ ನೀರ್ಕೋಡು ಚಂದ್ರಶೇಖರ ಶೆಟ್ಟಿಯವರು ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವನ್ನು ವಿತರಿಸಿ, ವಿದ್ಯಾರ್ಥಿಗಳು ಕನ್ನಡ , ಇಂಗ್ಲೀಷ್, ಹಿಂದಿ ಭಾಷೆಗಳಲ್ಲಿ ಮಾಡಿದ ಭಾಷಣಗಳನ್ನು ನೋಡಿ ಹರ್ಷ ವ್ಯಕ್ತಪಡಿಸಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಿವೃತ್ತ ಅಧ್ಯಾಪಕ ಎಚ್ ಶೇಖರ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸುತ್ತಾ ದಾನಿಗಳಿಗೆ ಶುಭ ಹಾರೈಸಿದರು.
ಗಣೇಶೋತ್ಸವ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಶ್ರೀಕಾಂತ ಶೆಟ್ಟಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಗೋಳಿಯಂಗಡಿ ಶಾಖೆಯ ಅಧ್ಯಕ್ಷ ರತ್ನಾಕರ ಶೆಟ್ಟಿ ಮಲ್ಯಾಡಿ ಮನೆ, ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಉದಯಕುಮಾರ ಶೆಟ್ಟಿ ಹಾಗೂ ನಾಗರಾಜ ಕುಲಾಲ, ಪ್ರಗತಿ ಪರ ಕೃಷಿಕ ಸದಾಶಿವ ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆ ವಿನೋದಾ ಶೆಟ್ಟಿ ಉಪಸ್ಥಿತರಿದ್ದರು.
ಸಹ ಶಿಕ್ಷಕಿ ಸುಜಾತ ಎಚ್ ಕಾರ್ಯಕ್ರಮ ನಿರೂಪಿಸಿ, ಮುಖ್ಯ ಶಿಕ್ಷಕ ರಾಮ ಮೊಗವೀರ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೌರವ ಶಿಕ್ಷಕಿ ಭಾರತಿ ವಂದಿಸಿದರು. ಗೌರವ ಶಿಕ್ಷಕಿ ಶಿವಾನಿ ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಿಸಿದರು. ಅಂಗನವಾಡಿ ಪುಟಾಣಿಗಳು ಹಾಗೂ ಶಾಲೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹಾಗೂ ದೇಶಭಕ್ತಿಗೆ ಸಂಬಂಧಿಸಿದ ವಿವಿಧ ನೃತ್ಯ ಹಾಗೂ ನೃತ್ಯ ರೂಪಕಗಳನ್ನು ಮತ್ತು ನೀರನ್ನು ಉಳಿಸಿ ಎಂಬ ಕಿರು ಪ್ರಹಸನವನ್ನು ಪ್ರದರ್ಶಿಸಿದರು.