ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಸಿಕೋ ಕೈ ಕರಾಟೆ ಇಂಟರ್ ನ್ಯಾಷನಲ್ ಇಂಡಿಯಾ ಮತ್ತು ಭಾರತ್ ಕರಾಟೆ ಅಕಾಡೆಮಿ ಇವರ ಸಂಯೋಜನೆಯಲ್ಲಿ ಆಗಸ್ಟ್ 11 ರಿಂದ 13 ರ ವರೆಗೆ ದೆಹಲಿಯ ತಾಲ್ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಿದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಂಶಿತಾ ಜಿ.ದೇವಾಡಿಗ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆಯುವುದರ ಮೂಲಕ ಕಂಚಿನ ಪದಕ ಜಯಿಸಿದ್ದಾರೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.