ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕುಂದಾಪುರ ಜಿಲ್ಲಾ ಹೋರಾಟ ಸಮಿತಿ, ಕನ್ನಡ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ, ಮಾಜಿ ಶಾಸಕ, ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಮಾರ್ಗದರ್ಶನದ ನಿಯೋಗ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಭೇಟಿ ಮಾಡಿದರು.
ಈ ಸಂಧರ್ಭದಲ್ಲಿ ಕುಂದಾಪುರ ಜಿಲ್ಲಾ ಹೋರಾಟ ಸಮಿತಿಯಿಂದ ಮನವಿ ನೀಡಲಾಯಿತು. ಬಳಿಕ ಮಾತನಾಡಿದ ಅವರು ಜನರ ಅಭಿಪ್ರಾಯವನ್ನು ಸ್ವೀಕರಿಸಿದ ಬಳಿಕ ಈ ಹೋರಾಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದಾರೆ.
ಸಂಚಾಲಕ ಮುಂಬಾರು ದಿನಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗಣಪತಿ ಶ್ರೀಯಾನ್, ಉಪಾಧ್ಯಕ್ಷ ದಸ್ತಗಿರ್ ಸಾಹೇಬ್, ಕಾವ್ರಡಿ ಭುಜಂಗ ಶೆಟ್ಟಿ, ಗೋಪಾಲ ಶೆಟ್ಟಿ, ಉಡುಪಿ ಜಿಲ್ಲಾ ವಿದ್ಯುತ್ ಗುತ್ತಿಗೆದಾರರ ಸಂಘ ಅಧ್ಯಕ್ಷ ಕೆ.ಆರ್.ನಾಯಕ್, ಗೋವಿಂದರಾಯ ಸೇರಿಗಾರ್, ಸೀತಾರಾಮ್ ಶೆಟ್ಟಿ, ನವೀನ ಚಂದ್ರ ಶೆಟ್ಟಿ ಕಾಡೂರು, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಕಿಶನ್ ಹೆಗ್ಗಡೆ ಉಪಸ್ಥಿತರಿದ್ದರು.