ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಪದವಿಪೂರ್ವ ಶಿಕ್ಷಣ ಇಲಾಖೆಯವರು ತ್ರಿಷಾ ಪದವಿಪೂರ್ವ ಕಾಲೇಜು ಉಡುಪಿಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಚದುರಂಗ (ಚೆಸ್) ಸ್ಪರ್ಧೆಯಲ್ಲಿ ವಿಜೇತಳಾದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ.ಪೂಜಾರಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.