ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲ ರೂ. 2000/- ಗಳನ್ನು ನೀಡುವ ಗ್ರಹಲಕ್ಷ್ಮಿ ಯೋಜನೆಯನ್ನು ಕರ್ನಾಟಕದ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೋಂದಣಿ ಯಾಗಿರುವ ಫಲಾನುಭೂಮಿಗಳಿಗೆ ಅಗಸ್ಟ್ 30ರಂದು ಮೈಸೂರಿನಲ್ಲಿ ಗ್ರಹಲಕ್ಷ್ಮೀ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಲೋಕಾರ್ಪಣೆ ಗೊಳಿಸಲಿದ್ದು, ಸದರಿ ಕಾರ್ಯಕ್ರಮಕ್ಕೆ ಎಲ್ಲಾ ಫಲಾನುಭೂಮಿಗಳು, ಸಾರ್ವಜನಿಕರು ,ಭಾಗಿಯಾಗಲು ಬ್ಲಾಕ್ ಕಾಂಗ್ರೆಸ್ ಕುಂದಾಪುರ ವ್ಯಾಪ್ತಿಯ ವಾರ್ಡ್ ಹಂತದಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಟಿ.ವಿ/ ಎಲ್.ಇ.ಡಿ ಪರದೇ ವ್ಯವಸ್ಥಗೊಳಿಸಲಾಗುತ್ತದೆ. ಸದರಿ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಫಲಾನುಭೂಮಿಗಳು, ಚುನಾಯಿತ ಜನಪ್ರತಿನಿಧಿಗಳು ಹಾಜರಾಗಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳಲಾಗಿದೆ.
ಫಲಾನುಭೂಮಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಸಂದೇಶ ಬರುವುದರಿಂದ ನೋಂದಾಯಿತ ಫಲಾನುಭೂಮಿಗಳು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿಕೊಂಡಿರುವ ಮೊಬೈಲ್ ಫೋನ್ಗಳೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಬೇಕಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಕಾರ್ಯಕ್ರಮ ಆಯೋಜಿಸಿದ ಸ್ಥಳದ ವಿವರ