ಕುಂದಾಪುರ ಮಿರರ್ ಸುದ್ದಿ..
ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ – 60 ಕೆ. ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.