ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು – ವೃತ್ತಿ ಮಾರ್ಗದರ್ಶನದ ಮಾಹಿತಿ ಕಾರ್ಯಕ್ರಮ

0
379

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ :ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷರಾದ ವಸಂತರಾಜ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ
ವೃತ್ತಿ ಮಾರ್ಗದರ್ಶನದ ಅಗತ್ಯತೆಯ ಕುರಿತು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಲಯನ್ಸ್ ಕ್ಲಬ್ ಉಡುಪಿ ಲಕ್ಯ್ಯ ಇದರ ಅಧ್ಯಕ್ಷರಾದ ಧನುಷ್ ಕೆ ಇವರು ವಿದ್ಯಾರ್ಥಿ ಬದುಕಿಗೆ ಇಂತಹ ನೂರಾರು ಕಾರ್ಯಕ್ರಮಗಳ ಅಗತ್ಯತೆ ಬಹಳಷ್ಟಿದೆ ಎಂದರು.

Click Here

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಜಿಲ್ಲೆ 317 ರವಿರಾಜ್ ನಾಯಕ್ ರವರು ವೃತ್ತಿ ಮಾರ್ಗದರ್ಶನದ ಕುರಿತಾಗಿ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಉಡುಪಿ ಲಯನ್ಸ್ ಕ್ಲಬ್ ಲಕ್ಷ್ಯ ಇದರ ಉಪಾಧ್ಯಕ್ಷರಾದ ರಘುನಾಥ ನಾಯಕ್, ಕುಂದಾಪುರ ಲಯನ್ಸ್ ಕ್ಲಬ್ ಕೋಸ್ಟಲ್ ಇದರ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಹಾಗೂ ಖಜಾಂಚಿ ಸುಕುಮಾರ ಶೆಟ್ಟಿ,ಕಾಲೇಜಿನ ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಉಪನ್ಯಾಸಕ ಉದಯ ನಾಯ್ಕ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.

ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗೌತಮ್ ಸ್ವಾಗತಿಸಿ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ನೌಫಾಲ್ ವಂದಿಸಿದರು.

Click Here

LEAVE A REPLY

Please enter your comment!
Please enter your name here